Tuesday, May 30, 2023

Latest Posts

ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :
 
ಹಾಸನ ಜಿಲ್ಲೆಯ ಅರಸೀಕೆರೆಯ ಮಾಜಿ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು ಇಂದು ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಹಾಸನದ ಅರಸೀಕೆರೆಯ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶವನ್ನು ಮಾಜಿ ಶಾಸಕ ಕೆ.ಎಂ ಶಿವಲಿಂಗೇಗೌಡ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಇವಕುಮಾರ್ ಭಾಗಿಯಾಗಿದ್ದರು.ಮಾಜಿ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಟವಲ್, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಅರಸೀಕೆರೆ ಕ್ಷೇತ್ರದಿಂದ 3 ಬಾರಿ ಜೆಡಿಎಸ್ ಪಕ್ಷದಿಂದ ಗೆದ್ದು ಕೆ.ಎಂ ಶಿವಲಿಂಗೇಗೌಡ ಶಾಸಕರಾಗಿದ್ದರು. ಈ ಬಳಿಕ ಜೆಡಿಎಸ್ ಗೆ ಗುಡ್ ಬೈ ಹೇಳಿದ್ದಲ್ಲದೇ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!