Monday, November 10, 2025

ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಫಾರೂಕ್ ಅಹ್ಮದ್‌ಗೆ ಹೃದಯಾಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿಯ ಉಪಾಧ್ಯಕ್ಷ ಫಾರೂಕ್ ಅಹ್ಮದ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಮಧ್ಯಾಹ್ನ ಎದೆನೋವು ಕಾಣಿಸಿಕೊಂಡ ತಕ್ಷಣವೇ ಅವರನ್ನು ಢಾಕಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ವರದಿಯಾಗಿದೆ. ವೈದ್ಯಕೀಯ ತಂಡದ ಪ್ರಕಾರ, ಫಾರೂಕ್ ಅವರ ಹೃದಯದಲ್ಲಿ ಅಡಚಣೆ ಕಂಡುಬಂದಿದ್ದು, ತುರ್ತು ಶಸ್ತ್ರಚಿಕಿತ್ಸೆಯ ಮೂಲಕ ಹೃದಯದಲ್ಲಿ ಸ್ಟಂಟ್ ಅಳವಡಿಸಲಾಗಿದೆ.

ಶಸ್ತ್ರಚಿಕಿತ್ಸೆಯ ಬಳಿಕವೂ ಫಾರೂಕ್ ಅಹ್ಮದ್ ಅವರ ಆರೋಗ್ಯದಲ್ಲಿ ಏರಿಳಿತಗಳು ಕಂಡುಬಂದಿರುವುದರಿಂದ ಅವರನ್ನು ತೀವ್ರ ನಿಗಾದ ಘಟಕ (CCU) ಯಲ್ಲಿ ಇರಿಸಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆಯಾದರೂ, ವೈದ್ಯರು ಅವರ ಮೇಲೆ ನಿಗಾ ವಹಿಸಿದ್ದಾರೆ.

1988ರಲ್ಲಿ ಪಾಕಿಸ್ತಾನ್ ವಿರುದ್ಧದ ಏಕದಿನ ಪಂದ್ಯದಲ್ಲಿ ಫಾರೂಕ್ ಅಹ್ಮದ್ ಬಾಂಗ್ಲಾದೇಶ ಪರ ಕ್ರಿಕೆಟ್ ಪ್ರವೇಶಿಸಿದರು. 1999ರವರೆಗೆ ಅವರು ದೇಶದ ಪರ ಕಣಕ್ಕಿಳಿದು ನಾಯಕತ್ವ ವಹಿಸಿದ್ದರು. ನಿವೃತ್ತಿಯ ಬಳಿಕ ಅವರು ಎರಡು ಬಾರಿ ರಾಷ್ಟ್ರೀಯ ಆಯ್ಕೆ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

error: Content is protected !!