ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್​ಗೆ ಹೃದಯಾಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್​ಗೆ ಹೃದಯಾಘಾತವಾಗಿದೆ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಮೊಹಮ್ಮದನ್ ಸ್ಪೋರ್ಟಿಂಗ್ ಕ್ಲಬ್ ಮತ್ತು ಶಿನೆಪುಕುರ್ ಕ್ರಿಕೆಟ್ ಕ್ಲಬ್ ನಡುವಿನ 50 ಓವರ್‌ಗಳ ಪಂದ್ಯದ ಸಮಯದಲ್ಲಿ 36 ವರ್ಷದ ತಮೀಮ್​ಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ನಂತರ, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗಿದೆ.

ತಮೀಮ್​ಗೆ ಚಿಕಿತ್ಸೆ ಯಶಸ್ವಿ
ಹೃದಯಾಘಾತಕ್ಕೊಳಗಾದ ನಂತರ ತಮೀಮ್ ಇಕ್ಬಾಲ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಅಧಿಕೃತ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಿ, ‘ತಮೀಮ್ ಗಂಭೀರ ಸ್ಥಿತಿಯಲ್ಲಿ ನಮ್ಮ ಬಳಿಗೆ ಬಂದರು. ಅವರಿಗೆ ಹೃದಯಾಘಾತವಾಗಿದ್ದು, ನಾವು ಅವರಿಗೆ ಆಂಜಿಯೋಗ್ರಫಿ ಮತ್ತು ಆಂಜಿಯೋಪ್ಲ್ಯಾಸ್ಟಿ ಮಾಡಿಸಿದೆವು. ವೈದ್ಯಕೀಯ ಚಿಕಿತ್ಸೆ ಯಶಸ್ವಿಯಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

ತಮೀಮ್ ಅವರ ವೃತ್ತಿಜೀವನ
ಈ ವರ್ಷದ ಜನವರಿಯಲ್ಲಿ ತಮೀಮ್ ಎರಡನೇ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು. ಇದಕ್ಕೂ ಮೊದಲು, ಜುಲೈ 2023 ರಲ್ಲಿ, ಅವರು ಪತ್ರಿಕಾಗೋಷ್ಠಿಯಲ್ಲಿ ನಿವೃತ್ತಿ ಘೋಷಿಸಿದ್ದರು. ಆದರೆ ಆಗಿನ ಪ್ರಧಾನಿ ಶೇಖ್ ಹಸೀನಾ ಅವರ ಮಧ್ಯಸ್ಥಿಕೆಯ ನಂತರ 24 ಗಂಟೆಗಳ ಒಳಗೆ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದರು. ತಮೀಮ್ ಬಾಂಗ್ಲಾದೇಶ ಪರ 70 ಟೆಸ್ಟ್ ಪಂದ್ಯಗಳಲ್ಲಿ 5134 ರನ್ ಮತ್ತು 243 ಏಕದಿನ ಪಂದ್ಯಗಳಲ್ಲಿ 8,357 ರನ್ ಬಾರಿಸಿದ್ದಾರೆ. ಇದಲ್ಲದೆ, ಅವರು 78 ಟಿ20 ಪಂದ್ಯಗಳಲ್ಲಿ 1,758 ರನ್ ಕಲೆಹಾಕಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!