ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಸ್ವದೇಶಕ್ಕೆ ಹಸ್ತಾಂತರಿಸುವಂತೆ ಒತ್ತಡ ಹೆಚ್ಚುತ್ತಿರುವ ಮಧ್ಯೆಯೇ ಭಾರತವು ಅವರ ವೀಸಾ ಅವಧಿಯನ್ನು ವಿಸ್ತರಿಸಿದೆ.
ಅತ್ತ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಬಲವಂತದ ನಾಪತ್ತೆಗಳು ಮತ್ತು ಹತ್ಯೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಉಚ್ಚಾಟಿತ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ 96 ಮಂದಿಯ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿದೆ. ಇತ್ತ ಈ ಬೆಳವಣಿಗೆ ಮರುದಿನವೇ ಭಾರತ ವೀಸಾ ವಿಸ್ತರಣೆ ಮಾಡಿದೆ.
77 ವರ್ಷದ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ನಂತರ ಭಾರದಲ್ಲಿ ಆಶ್ರಯ ಕಂಡುಕೊಂಡಿದ್ದಾರೆ. ತನ್ನ 16 ವರ್ಷಗಳ ಅವಾಮಿ ಲೀಗ್ (ಎಎಲ್) ಆಡಳಿತವನ್ನು ವಿದ್ಯಾರ್ಥಿ ನೇತೃತ್ವದ ಬೃಹತ್ ಪ್ರತಿಭಟನೆ ಉರುಳಿಸಿದ ನಂತರ ಭಾರತದಲ್ಲಿ ವಾಸಿಸುತ್ತಿದ್ದಾರೆ.
ಬಾಂಗ್ಲಾದೇಶದ ಅಂತರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಹಸೀನಾ ಮತ್ತು ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು ಮತ್ತು ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ “ಮಾನವೀಯತೆ ಮತ್ತು ನರಮೇಧದ ವಿರುದ್ಧದ ಅಪರಾಧಗಳಿಗಾಗಿ” ಬಂಧನ ವಾರಂಟ್‌ಗಳನ್ನು ಹೊರಡಿಸಿದೆ. ಫೆಬ್ರವರಿ 12ರೊಳಗೆ ಬಂಧಿಸುವಂತೆ ಗಡುವನ್ನು ನಿಗದಿಪಡಿಸಿದೆ.