Sunday, September 25, 2022

Latest Posts

ಹೃದಯಾಘಾತದಿಂದ ಬಿಸಿಸಿಐ ಮಾಜಿ ಜಂಟಿ ಕಾರ್ಯದರ್ಶಿ ಅಮಿತಾಬ್ ಚೌಧರಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಸಿಸಿಐ ಮಾಜಿ ಜಂಟಿ ಕಾರ್ಯದರ್ಶಿ ಹಾಗೂ ಜಾರ್ಖಂಡ್‌ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಅಮಿತಾಬ್ ಚೌಧರಿ ಇಂದು ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.

ಇಲ್ಲಿನ ಅಶೋಕ್ ನಗರ ನಿವಾಸಿಯಾಗಿದ್ದ ಅಮಿತಾಬ್ ಚೌಧರಿ, ಇಂದು ಮುಂಜಾನೆ ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಅಮಿತಾಬ್ ಚೌಧರಿ ಅವರಿಗೆ ಹೃದಯಸ್ತಂಭನವಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಪ್ರಯತ್ನಿಸಲಾಯಿತಾದರೂ, ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಲು ವೈದ್ಯರಿಗೆ ಸಾಧ್ಯವಾಗಲಿಲ್ಲ.

ಇನ್ನು ಅಮಿತಾಬ್ ಚೌಧರಿಯವರ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕಂಬನಿ ಮಿಡಿದಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಮಿತಾಬ್ ಚೌಧರಿ, 2019ರವರೆಗೆಗೂ ಬಿಸಿಸಿಐ ಕಾರ್ಯದರ್ಶಿಯಾಗಿ ಕರ್ತವ್ಯ ನಿಭಾಯಿಸಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!