ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ವಿಧಿವಶರಾಗಿದ್ದಾರೆ. ಸುಶೀಲ್ ಮೋದಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ. ಅವರಿಗೆ 72 ವರ್ಷ ವಯಸ್ಸಾಗಿತ್ತು ಮತ್ತು ಕ್ಯಾನ್ಸರ್ನಿಂದ ಬಳಲುತ್ತಿದ್ದರು.
ಪ್ರಸ್ತುತ ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಸುಶೀಲ್ ಕುಮಾರ್ ಮೋದಿ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಇದು ಬಿಹಾರ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಕಳೆದ ಆರು ತಿಂಗಳಿಂದ ತಾವು ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಸ್ವತಃ ಸುಶೀಲ್ ಮೋದಿ ಈ ಹಿಂದೆ ಬಹಿರಂಗಪಡಿಸಿದ್ದರು.