ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬಿಜೆಪಿ ಟಿಕೆಟ್ ಕುರಿತು ಪಕ್ಷದ ವಿರುದ್ದ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಎಂ.ಬಿ ಪಾಟೀಲ್ ಮೊದಲಾದವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಏಳನೇ ಬಾರಿ ಸ್ಪರ್ಧೆಗೆ ಟಿಕೆಟ್ ನೀಡದ ಕಾರಣ ಶೆಟ್ಟರ್ ಬಿಜೆಪಿಗೆ ಶನಿವಾರ ರಾಜೀನಾಮೆ ನೀಡಿದ್ದರು.
ಶೆಟ್ಟರ್ ಮನವೊಲಿಕೆಗೆ ಕೇಂದ್ರ ಸಹಿತ ರಾಜ್ಯ ನಾಯಕರು ಕೆಲವು ದಿನಗಳಿಂದ ಪ್ರಯತ್ನಿಸುತ್ತಿದ್ದರು. ಆದರೆ ಬಿಜೆಪಿ ನಾಯಕರ ಪ್ರಯತ್ನ ವಿಫಲವಾಗಿದೆ.