ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಅವರನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್ ಬರಮಾಡಿಕೊಂಡರು.