Monday, October 2, 2023

Latest Posts

ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬ್ರಿಟನ್‌ನ (Britain) ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ತಮ್ಮ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

2020ರಲ್ಲಿ ಲಾಕ್‌ಡೌನ್ (Lockdown) ನಿಯಮಗಳನ್ನು ಉಲ್ಲಂಘಿಸಿ ಔತಣಕೂಟ ಮಾಡಿದ್ದಕ್ಕೆ ಬೋರಿಸ್ ಜಾನ್ಸನ್ ಬ್ರಿಟನ್‌ನ ಪ್ರಧಾನಿ (Biritain PM) ಹುದ್ದೆಯನ್ನು ಕಳೆದುಕೊಂಡಿದ್ದರು.

ಪಾರ್ಟಿ ಗೇಟ್ (Partygate) ಹಗರಣಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ಸಂಸತ್ತಿನ ಹೌಸ್ ಆಫ್ ಕಾಮನ್ಸ್ ಮಾಜಿ ಪ್ರಧಾನಿ ಅವರಿಗೆ ಪತ್ರವೊಂದನ್ನು ಬರೆದಿದೆ. ಅಂದು ಔತಣಕೂಟದಲ್ಲಿ ಕೊರೊನಾಗೆ ಸಂಬಂಧಿಸಿದ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿರುವುದಾಗಿ ಜಾನ್ಸನ್ ಹೇಳಿದ್ದರು. ಈ ಕುರಿತು ಹೌಸ್ ಆಫ್ ಕಾಮನ್ಸ್ ಸಮಿತಿ ಪತ್ರ ಬರೆದು ಸ್ಪಷ್ಟೀಕರಣ ಕೇಳಿರುವ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ಸಂಸತ್ ಸದಸ್ಯತ್ವವನ್ನು ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಈ ಬಗ್ಗೆ ತಿಳಿಸಿರುವ ಬೋರಿಸ್, ಹೌಸ್ ಆಫ್ ಕಾಮನ್ಸ್ ಕಳುಹಿಸಿರುವ ಪತ್ರದಿಂದ ತಮಗೆ ಆಘಾತವಾಗಿದೆ ಎಂದು ಹೇಳಿದ್ದಾರೆ. ಬಹುಪಾಲು ಕನ್ಸರ್ವೇಟಿವ್ ಸಂಸದರನ್ನು ಹೊಂದಿರುವ ಸಂಸದ ನೇತೃತ್ವದ ಸಮಿತಿ ಸೋಮವಾರ ತನ್ನ ವಿಚಾರಣೆಯನ್ನು ಮುಕ್ತಾಯಗೊಳಿಸಲಿದೆ. ತನ್ನ ವರದಿಯನ್ನು ಶೀಘ್ರವೇ ಪ್ರಕಟಿಸುವುದಾಗಿ ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!