ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮೂರ್ತಿ ಭಾರತ ಪ್ರವಾಸ ಕೈಗೊಂಡಿದ್ದು, ಬೆಂಗಳೂರಿನ ಜಯನಗರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ದಂಪತಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಅವರ ಜೊತೆ, ಲೇಖಕಿ, ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮತ್ತು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಕೂಡ ಪ್ರಾರ್ಥನೆ ಸಲ್ಲಿಸಿದ್ದಾರೆ.