ಭಾರತ ಮಹಿಳಾ ಹಾಕಿ ತಂಡದ ಮಾಜಿ ನಾಯಕಿ ಎಲ್ವೆರಾ ಬ್ರಿಟ್ಟೋ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಮಹಿಳಾ ಹಾಕಿ ತಂಡದ ಮಾಜಿ ನಾಯಕಿ ಎಲ್ವೆರಾ ಬ್ರಿಟ್ಟೋ ವಯೋಸಹಜ ಖಾಯಿಲೆಗಳಿಂದಾಗಿ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
81 ವರ್ಷದ ಎಲ್ವೆರಾ, 60ರ ದಶಕದ ಭಾರತ ಹಾಕಿ ವಲಯದಲ್ಲಿ ಬ್ರಿಟ್ಟೊ ಸಹೋದರಿಯರೆಂದೇ (ರೀತಾ ಮತ್ತು ಮೇ) ಪ್ರಸಿದ್ಧಿಯಾಗಿದ್ದ ಮೂವರು ಸಹೋದರಿಯರಲ್ಲಿ ಹಿರಿಯವರು.
ಈ ಮೂವರು 1960-67ರವರೆಗ ದೇಶಿ ಟೂರ್ನಿಗಳಲ್ಲಿ ತಮ್ಮದೇ ಪ್ರಾಬಲ್ಯ ಸಾಧಿಸಿ ಕರ್ನಾಟಕ ತಂಡಕ್ಕೆ 7 ರಾಷ್ಟ್ರೀಯ ಚಾಂಪಿಯನ್​ಶಿಪ್ ತಂದುಕೊಟ್ಟಿದ್ದರು.
ಎಲ್ವಿರಾಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ಆಡಿದ್ದಾರೆ. 1965ರಲ್ಲಿ ಇವರಿಗೆ ಪದ್ಮ ಪ್ರಶಸ್ತಿ ದೊರೆತಿದ್ದು, ಈ ಪ್ರಶಸ್ತಿ ಪಡೆದ 2ನೇ ಮಹಿಳಾ ಹಾಕಿ ಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!