ದೇವರಾಜೇಗೌಡರಿಗೆ ಪೆನ್‌ಡ್ರೈವ್‌ ಕೊಟ್ಟಿದ್ದೆ ಎಂದ ಮಾಜಿ ಕಾರು ಚಾಲಕ, ಇದೇನು ಹೊಸ ಟ್ವಿಸ್ಟ್‌?

ದಿಗಂತ ವರದಿ ಹಾಸನ :

ಸಂಸದ ಪ್ರಜ್ವಲ್‌ರೇವಣ್ಣ ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು,
ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾನ ಸ್ಥಳದಲ್ಲಿ ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ಹಿಂಸೆ ಕೊಟ್ಟರು ಹಲ್ಲೆ ಮಾಡಿದರು, ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್‌ರೇವಣ್ಣ ಸ್ಟೇ ತರುತ್ತಾರೆ

ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್, ನಾನು ಯಾರಿ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ದರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ. ದೇವರಾಜೆಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್‌ ನವರಿಗಂತು ನಾನು ವಿಡಿಯೋ ಕೊಟ್ಟಿಲ್ಲ ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೂ ಕೊಟ್ಟಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.

ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದೆ. ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿ ಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲಾ ವಿವರವಾಗಿ ಹೇಳುತ್ತೇನೆ. ಕಾಂಗ್ರೆಸ್‌ನವರ ಹೆಸರನ್ನು ಬೆರೆಸಬೇಡಿ. ದೇವೇಗೌಡರನ್ನು ಬಿಟ್ಟರೆ ಯಾರಿಗೂ ಒಂದು ತುಣುಕು ಕೊಟ್ಟಿಲ್ಲ. ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಕೂಲಂಕಷವಾಗಿ ಹೇಳುತ್ತೇನೆ. ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆ ಧೈರ್ಯವಾಗಿ ಮುಂದೆ ಬನ್ನಿ ಎಂದು ಮಾಜಿ ಕಾರು ಚಾಲಕ ಕಾರ್ತಿಕ್ ವಿಡೀಯೋ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!