ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
68 ವರ್ಷದ ಸಿನ್ಹಾ ಅವರು, 1974ರ ಬಿಹಾರ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದರು. ಇಂಡೋ-ಟಿಬೆಟಿಯನ್ ಪೊಲೀಸ್ ಹಾಗೂ ರೈಲ್ವೆ ರಕ್ಷಣಾ ಪಡೆಯಲ್ಲಿಯೂ ಸಿನ್ಹಾ ಅವರು ಸೇವೆ ಸಲ್ಲಿಸಿದ್ದರು. ಇದಾದ ಬಳಿಕ ಪುಣೆ ಹಾಗೂ ದೆಹಲಿ ಸಿಬಿಐನಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2012ರಲ್ಲಿ ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು.
ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿದ್ದವರೊಂದಿಗೆ ಮನೆಯಲ್ಲಿ ಸಭೆ ನಡೆಸಿದ ಆರೋಪ ಹಿನ್ನೆಲೆಯಲ್ಲಿ 2017ರಲ್ಲಿ ಸಿಬಿಐ ಮಾಜಿ ಮುಖ್ಯಸ್ಥರ ವಿರುದ್ಧವೇ ತನಿಖೆ ನಡೆಸಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸಭೆಗಳ ಬಗ್ಗೆ ಸಿಬಿಐ ತನಿಖೆ ನಡೆಸಿತು.