Friday, August 12, 2022

Latest Posts

ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

ಕೋವಿಡ್‌-19 ಸಂಬಂಧಿಸಿದ ಕಾರಣಗಳಿಂದಾಗಿ ಸಾವು ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ. ರಂಜಿತ್ ಸಿನ್ಹಾ ಅವರಿಗೆ ಕೊರೋನಾ ವೈರಸ್‌ ಸೋಂಕು ತಗುಲಿರುವುದು ಗುರುವಾರ ರಾತ್ರಿ ದೃಢಪಟ್ಟಿತ್ತು.

ರಂಜಿತ್ ಅವರು 1974 ರ ಬ್ಯಾಚ್ ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ನಿವೃತ್ತ ಅಧಿಕಾರಿಯಾಗಿದ್ದು, ಸಿಬಿಐ ನಿರ್ದೇಶಕ ಮತ್ತು ಡಿಜಿ ಐಟಿಬಿಪಿ ಸೇರಿದಂತೆ ವಿವಿಧ ಹಿರಿಯ ಹುದ್ದೆಗಳನ್ನು ಅಲಂಕರಿಸಿದ್ದರು. 

ಇಂದು ಬೆಳಗ್ಗೆ 4.30ರ ಸುಮಾರಿಗೆ ದೆಹಲಿಯಲ್ಲಿ ನಿಧನರಾಗಿದ್ದಾರೆಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss