November 12, 2026
Thursday, November 12, 2026
spot_img

ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ಡಾ. ಎನ್.ಆರ್. ಶೆಟ್ಟಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ, ದೇಶದ ಹಿರಿಯ ಶಿಕ್ಷಣ ತಜ್ಞರಲ್ಲಿ ಒಬ್ಬರಾದ ಪ್ರೊ.(ಡಾ.) ಎನ್‌.ಆರ್‌.ಶೆಟ್ಟಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ತಮ್ಮ ಹುಟ್ಟೂರಾದ ಕಾರ್ಕಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಶೆಟ್ಟಿ ಅವರ ನಿಧನದಿಂದ ಶಿಕ್ಷಣ ಕ್ಷೇತ್ರದ ಹಿರಿಯ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ.

ಇಂದು ಮಧ್ಯಾಹ್ನ 3.30ಕ್ಕೆ ಕಾರ್ಕಳದಲ್ಲಿರುವ ಅವರ ತೋಟದ ಮನೆಯಲ್ಲಿ ಅಂತ್ಯತಕ್ರಿಯೆ ನೆರವೇರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಗೌರವ ಗಳಿಸಿದ್ದ ಪ್ರೊ. ಎನ್.ಆರ್. ಶೆಟ್ಟಿ ಅವರ ನಿಧನಕ್ಕೆ ಗಣ್ಯರು ಹಾಗೂ ಶಿಕ್ಷಣ ಕ್ಷೇತ್ರದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Must Read