ಮಾಜಿ ಮುಖ್ಯ ಚುನಾವಣಾ ಆಯುಕ್ತ ಮನೋಹರ್ ಸಿಂಗ್ ಗಿಲ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಹಾಗೂ ಕಾಂಗ್ರೆಸ್ ನಾಯಕ ಮನೋಹರ್ ಸಿಂಗ್ ಗಿಲ್ ಭಾನುವಾರ ವಿಧಿವಶರಾಗಿದ್ದಾರೆ.

ಅವರಿಗೆ 86 ವರ್ಷ ವಯಸ್ಸಾಗಿತ್ತು. ಡಾ. ಗಿಲ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯಲ್ಲಿ ನಡೆಯಲಿದೆ.

ಮನಮೋಹನ್ ಸಿಂಗ್ ಸರ್ಕಾರದಲ್ಲಿ ಗಿಲ್ ಕ್ರೀಡಾ ಸಚಿವರಾಗಿದ್ದರು. ಇತ್ತೀಚೆಗೆ ಅನಾರೋಗ್ಯ ಹಿನ್ನೆಲೆ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದರು.

ಮಾಜಿ ಮುಖ್ಯ ಚುನಾವಣಾ ಆಯುಕ್ತ ಡಾ ಮನೋಹರ್ ಸಿಂಗ್ ಗಿಲ್ ಅವರ ನಿಧನಕ್ಕೆ ಚುನಾವಣಾ ಆಯೋಗ ಸಂತಾಪ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!