ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ಗೂ ಬಿಜೆಪಿ ಟಿಕೆಟ್‌ ಮಿಸ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಬಿಜೆಪಿಯ ಕೆಲವು ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಎಲ್ಲ ಲಕ್ಷಣ ಕಾಣುತ್ತಿದ್ದು, ಈ ನಡುವೆ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೂ ಟಿಕೆಟ್ ಕೈತಪ್ಪಲಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿರುವುದರಿಂದ ನಗರದ ಜಗದೀಶ್ ಶೆಟ್ಟರ್ ನಿವಾಸದತ್ತ ಅಭಿಮಾನಿಗಳು ದೌಡಾಯಿಸಿದ್ದಾರೆ.

ತಮಗೆ ನಿವೃತ್ತಿ ಘೋಷಿಸಲು ಹೈಕಮಾಂಡ್‌ನಿಂದ ಕರೆ ಬಂದಿದೆ. ಆದರೆ, ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಕೇಳಿದ್ದೇನೆ. ಅದನ್ನು ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಖುದ್ದು ಜಗದೀಶ್‌ ಶೆಟ್ಟರ್‌ ಅವರು ಹೇಳಿದ್ದಾರೆ.

ಬೆಳಗ್ಗೆ ವರಿಷ್ಠರಿಂದ ಫೋನ್ ಬಂದಿತ್ತು. ನೀವು ಸೀನಿಯರ್, ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದಾರೆ. ನಾನು 30 ವರ್ಷಗಳಿಂದ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಮತ್ತೊಮ್ಮೆ ನನಗೆ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಹೀಗಾಗಿ ನನಗೆ ಟಿಕೆಟ್‌ ಸಿಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

30 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದೇನೆ. ಬಿಎಸ್ ಯಡಿಯೂರಪ್ಪ ಜೊತೆ ಸೇರಿ ಪಕ್ಷ ಸಂಘಟನೆ ಮಾಡಿದ್ದೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದೇನೆ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ನಿಜ. ಹೆಚ್ಚು ಮತಗಳ ಅಂತರದಿಂದ ಗೆದ್ದು ಬರುವುದು ನಿಶ್ಚಿತ ಎಂದರು.

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಜನರು ನನ್ನ ಮೇಲೆ ಪ್ರೀತಿ ವಿಶ್ವಾಸ ತೋರಿದ್ದಾರೆ. ಈ ಬಾರಿಯೂ ಸ್ಪರ್ಧಿಸಿ 7ನೇ ಬಾರಿ ಆಯ್ಕೆಯಾಗುವುದು ನಿಶ್ಚಿತ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!