ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗೆ ಮತ್ತೆ ಗೃಹಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ .
ಈ ಕುರಿತು ತಿಳಿಸಿದ ಅವರು, ಇತ್ತೀಚೆಗೆ ಶೋಪಿಯಾನ್‌ ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್ ಅವರ ಕುಟುಂಬವನ್ನು ಭೇಟಿ ಮಾಡುವುದನ್ನು ತಡೆಯಲು ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಭಾನುವಾರ ಹೇಳಿದ್ದಾರೆ.
ಗುಪ್ಕರ್ ಪ್ರದೇಶದಲ್ಲಿನ ತಮ್ಮ ನಿವಾಸದ ಬೀಗ ಹಾಕಿದ ಗೇಟ್‌ ಗಳು ಮತ್ತು ಹೊರಗೆ ನಿಂತಿದ್ದ ಸಿಆರ್‌ಪಿಎಫ್ ವಾಹನದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!