ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ಆಯ್ಕೆ ಮಾಡಲಾಗಿದೆ. ಆಮ್ ಆದ್ಮಿ ಪಕ್ಷದ ಎಲ್ಲಾ ಶಾಸಕರ ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ಸೇರಿದಂತೆ ಪಕ್ಷದ 22 ಶಾಸಕರು ಭಾಗವಹಿಸಿದ್ದರು.
ಅತಿಶಿ ದೆಹಲಿ ವಿಧಾನಸಭೆಯಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆಯಾಗಿದ್ದಾರೆ.
ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಪ್ರಾರಂಭವಾಗಲಿದೆ. ಮೂರು ದಿನಗಳ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಸರ್ಕಾರದ ಕಾರ್ಯಕ್ಷಮತೆಯ ವಿರುದ್ಧ ಬಾಕಿ ಉಳಿದಿರುವ ಸಿಎಜಿ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ಹೇಳಿದೆ.