ಮಾದಾರ ಚನ್ನಯ್ಯ ಗುರುಪೀಠಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಹೊಸದಿಗಂತ ವರದಿ,ಚಿತ್ರದುರ್ಗ:

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಸಿ.ಸಿ.ಪಾಟಿಲ್ ನಗರದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಬಸವಮೂರ್ತಿ ಮಾದಾರ ಚೆನ್ನಯ್ಯ ಅವರ ಜೊತೆ ಮಾತುಕತೆ ನಡೆಸಿದರು.

ಶುಕ್ರವಾರ ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದ ಬೊಮ್ಮಾಯಿ, ಮಠದಲ್ಲೇ ಉಪಹಾರ ಸೇವಿಸಿ ಬಹಳ ಹೊತ್ತಿನವರೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಹಾವೇರಿ ಕ್ಷೇತ್ರದ ಹಲವು ಮುಖಂಡರು ಮಠದಲ್ಲಿದ್ದು, ಶ್ರೀಗಳು ಹಾಗೂ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿದರು.

ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗಮಧ್ಯೆ ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಚಿತ್ರದುರ್ಗ ಬಿಜೆಪಿ ಟಿಕೇಟ್ ಇನ್ನೂ ಅಂತಿಮವಾಗದ ಕಾರಣ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಕೆಟ್ ಹಂಚಿಕೆ ಕುರಿತು ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಗೃಹ ಸಚಿವರು ಚರ್ಚಿಸಿ ತೀರ್ಮಾನ ಮಾಡುತ್ತಾರೆ. ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ಟಿಕೆಟ್ ನೀಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಎಲ್ಲ ಊಹಾಪೋಹ ಅಧಿಕೃತ ಘೋಷಣೆಯಾದ ಮೇಲೆ ನಿಜ ಸಂಗತಿ ತಿಳಿಯುತ್ತದೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಗೃಹ ಸಚಿವರೇ ಹೇಳಿಕೆ ನೀಡಿದ್ದಾರೆ. ದೂರು ನೀಡಿರುವವರು ಮಾನಸಿಕ ಅಸ್ವಸ್ಥರು. ಈ ಹಿಂದೆ ಹೀಗೆ ಅನೇಕರ ವಿರುದ್ಧ ದೂರು ನೀಡಿದ್ದರು. ಇದು ರಾಜಕೀಯವಾಗಿ ಹೆಸರಿಗೆ ಕಪ್ಪು ಮಸಿ ಬಳಿಯುವ ಪ್ರಯತ್ನ. ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಸತ್ಯಕ್ಕೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!