ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧನ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ  ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ಒಂದು ಪಕ್ಷ ಕೋರ್ಟ್ ವಾರಂಟ್ ಜಾರಿ ಮಾಡಿದರೆ ಪೊಲೀಸರು ಬಿಎಸ್​ ಯಡಿಯೂರಪ್ಪನವರನ್ನು ಬಂಧಿಸಲಿದ್ದಾರೆ.

ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್​ಗೆ ಉತ್ತರ ನೀಡಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!