ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತೆ ಸಂಕಷ್ಟ: FIR ದಾಖಲಿಸಿ ತನಿಖೆಗೆ ಆದೇಶಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ.

ಇಂದು ನಡೆದ ವಿಚಾರಣೆಯಲ್ಲಿ ಕೋರ್ಟ್ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಗೆ ಆದೇಶ ನೀಡಿದೆ. ಅಲ್ಲದೇ ನವೆಂಬರ್ 2ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ಸೂಚಿಸಿದೆ.

ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಿಂ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!