ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ: ನಿಖಿಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆ ಅತ್ಯಂತ ಯಶಸ್ವಿಯಾಗಿ ನಡೆದಿದೆ.

ಈ ಕುರಿತು ಗಿ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ನನ್ನ ತಂದೆಯವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು. ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರೋದಾಗಿ ತಿಳಿಸಿದ್ದಾರೆ.

ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ.ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!