ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಸುಧಾರಣೆ: ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಅನಾರೋಗ್ಯ, ತೀವ್ರ ಜ್ವರದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಬೆಳಗ್ಗೆ ಅಥವಾ ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬುಧವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಎರಡು ದಿನ ಐಸಿಯುನಲ್ಲಿ ಚಿಕಿತ್ಸೆ ನೀಡಿ ಬಳಿಕ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಇಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!