ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಅವರ ನಿಧನ ಸುದ್ದಿಯಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹೆಸರಾಂತ ಅರ್ಥಶಾಸ್ತ್ರಜ್ಞ ಮತ್ತು ಆರ್ಥಿಕ ಸುಧಾರಣೆಗಳ ಪ್ರವರ್ತಕ. ದೂರದೃಷ್ಟಿ, ಶಿಸ್ತು ಮತ್ತು ಆರ್ಥಿಕ ವಿವೇಕದಿಂದ ದೇಶವನ್ನು ಕಷ್ಟಕಾಲದಲ್ಲಿ ಮುನ್ನಡೆಸಿದ ಶ್ರೀ.ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರ. ಅವರು ಆರ್ಥಿಕ ಸುಧಾರಣೆಗಳ ಮೂಲಕ ಭಾರತಕ್ಕೆ ಮನ್ನಣೆ ಗಳಿಸಿದರು.
ಅವರ ಕೊಡುಗೆಗಳು ಚಿರಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.