ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರನ್ನು ಇಂದು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಡಿಸ್ಚಾರ್ಜ್ ಬಳಿಕ ಪ್ರವಾಸ ಮಾಡಬಾರದು , ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.