ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರಿಗೆ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬರಬಾರದಿತ್ತು ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಎಚ್ಡಿಕೆ ಅವರ ಜೆಪಿನಗರ ನಿವಾಸದಲ್ಲಿ ದೀಪಾವಳಿಗೆ ದೀಪಗಳ ಅಲಂಕಾರ ಮಾಡಲಾಗಿದೆ. ನೇರವಾಗಿ ವಿದ್ಯುತ್ ಕಂಬದಿದ್ದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಜಗತ್ತಿನ ಏಕೈಕ ಮಹಾಪ್ರಾಮಾಣಿಕನಂತೆ ಆಡುವ ಎಚ್ಡಿಕೆ ಇದೀಗ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂಗೆ ಇಂಥ ದಾರಿದ್ರ್ಯ ಬಂದಿದ್ದು ದುರಂತ, ಗೃಹಜ್ಯೋತಿ ಯೋಜನೆಯಲ್ಲಿ 200 ಯುನಿಟ್ ಫ್ರೀ ಹೇಳಿದ್ದೇವೆ, 2000 ಅಲ್ಲ! ಎಂದು ಕಾಂಗ್ರೆಸ್ ಕಾಲೆಳೆದಿದೆ.
https://x.com/INCKarnataka/status/1724299863586963705?s=20