ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್ ಬುಕ್ ಖಾತೆ ಹ್ಯಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.

ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವ ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೆ, ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್​ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ ಹಾಕಬಾರದು ಎಂದು ನೆಟ್ಟಿಗರಿಗೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!