Friday, October 3, 2025

BRS ಪಕ್ಷ ತೊರೆದ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕೆ.ಕವಿತಾ, MLC ಸ್ಥಾನಕ್ಕೂ ರಾಜೀನಾಮೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅಮಾನತುಗೊಂಡ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕೆ. ಕವಿತಾ ಬಿಆರ್‌ಎಸ್‌ ಪಕ್ಷ ತೊರೆದಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌ನ ಸದಸ್ಯತ್ವಕ್ಕೆ ಕೂಡ ಇಂದು ರಾಜೀನಾಮೆ ನೀಡಿದ್ದಾರೆ.

ಕೆಸಿಆರ್ ವಿರುದ್ಧದ ಫೆಡರಲ್ ತನಿಖೆಗೆ ತಮ್ಮ ಸೋದರಸಂಬಂಧಿ, ಹಿರಿಯ ಬಿಆರ್‌ಎಸ್ ನಾಯಕ ಟಿ.ಹರೀಶ್ ರಾವ್ ಅವರನ್ನು ಕವಿತಾ ಸಾರ್ವಜನಿಕವಾಗಿ ದೂಷಿಸಿದ್ದರು. ತೆಲಂಗಾಣದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಕಾಲೇಶ್ವರಂ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ತನಿಖೆಯನ್ನು ಸಿಬಿಐಗೆ ವಹಿಸಿದ ಬೆನ್ನಲ್ಲೇ ಈ ಆರೋಪ ಮಾಡಿದ್ದರು. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅವರನ್ನ ಮಂಗಳವಾರ ಅಮಾನತುಗೊಳಿಸಲಾಗಿತ್ತು.