ಪ್ರಧಾನಿ ಭೇಟಿ ಬೆನ್ನಲ್ಲೇ ಸರಣಿ ಟ್ವೀಟ್‌ ಮಾಡಿ ಟೀಕಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದೊಯವರು ಮಂಡ್ಯಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡಿ ಕಿಡಿ ಕಾರಿದ್ದಾರೆ. ಜೆಡಿಎಸ್‌ ಭದ್ರಕೋಟೆಯಲ್ಲಿ ಮೋದಿ ರೋಡ್‌ ಸೋ ನಡೆಸುತ್ತಿದ್ದಾರೆ. ಬಳಿಕ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಕೂಡ ಉದ್ಘಾಟಿಸಲಿದ್ದಾರೆ. ಈ ಕುರಿತು ಪ್ರಧಾನಿಗೆ ಪ್ರಶ್ನೆಗಳನ್ನು ಎತ್ತಿದ್ದಾರೆ ಕುಮಾರಸ್ವಾಮಿ.

ʻಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ರಹದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲʼ

ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ. ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತಾ. ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಹೆದ್ದಾರಿ ಕುರಿತು ಪ್ರಶ್ನೆಗಳೆನ್ನೆತ್ತಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!