ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ವೈದ್ಯರ ತಂಡ ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಸದ್ಯ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಮೂರು ದಿನಗಳ ಮುಂಚೆಯೇ ಎಚ್‌ಡಿಕೆ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದರು. ಮೂರನೇ ಬಾರಿ ಹೃದಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಮಂಡ್ಯ, ಹಾಸನ, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಎಚ್‌ಡಿಕೆ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.