ಕಮಲದ ಕಂಪಿಗೆ ಪಂಜಾಬ್‌ನ ಮಾಜಿ ಸಿಎಂ ಕ್ಯಾ. ಅಮರಿಂದರ್ ಸಿಂಗ್ ಫಿದಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ನ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿ ಅಂಗಳಕ್ಕೆ ಬರಲು ಸಕಲ ಸಿದ್ಧತೆಗಳಲ್ಲಿದ್ದು, ತಾವು ಕಟ್ಟಿರುವ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ವ್ಯಾಪಕ ಸದ್ದು ಮಾಡುತ್ತಿದೆ.

ಬೆನ್ನಿನ ಶಸ್ತ್ರಚಿಕಿತ್ಸೆಗೆ ಸದ್ಯ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ಮುಂದಿನ ವಾರದ ಕೊನೆಯಲ್ಲಿ ಭಾರತಕ್ಕೆ ಮರಳುವ ಸಾಧ್ಯತೆಯಿದ್ದು, ಆ ಬಳಿಕ ಸೇರ್ಪಡೆಯ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಉನ್ನತ ಸುದ್ದಿ ಮೂಲಗಳು ಹೇಳಿವೆ.
ಅಮರಿಂದರ್ ಸಿಂಗ್ ಅವರು ಕಳೆದ ವರ್ಷದ ಕೊನೆಯಲ್ಲಿ ಸಿಎಂ ಹುದ್ದೆಯಿಂದ ತೆಗೆದುಹಾಕಲ್ಪಟ್ಟ ಬಳಿಕ ಕಾಂಗ್ರೆಸ್ ಪಕ್ಷ ತೊರೆದು ಹೊಸ ರಾಜಕೀಯ ಪಕ್ಷ ರಚಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!