ಛತ್ತೀಸ್ ಗಢ ಸ್ಪೀಕರ್ ಚುನಾವಣೆ: ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ರಮಣ್ ಸಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್ ಗಢದಲ್ಲಿ ಸ್ಪೀಕರ್ ಹುದ್ದೆಗೆ ಮಾಜಿ ಸಿಎಂ ರಮಣ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ.

ಛತ್ತೀಸ್ ಗಢದಲ್ಲಿ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬಂದಿದ್ದು, ಸ್ಪೀಕರ್ ನೇಮಕವಾಗಬೇಕಿದೆ. ಡಿ.19 ರಿಂದ ಛತ್ತೀಸ್ ಗಢದ 6 ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿ ಶಾಸಕ ರಾಮ್ ವಿಚರ್ ನೇತಮ್ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ. ರಾಜ್ ನಂದ್ ಗಾಂವ್ ನಿಂದ ಆಯ್ಕೆಯಾಗಿರುವ 71 ವರ್ಷದ ರಮಣ್ ಸಿಂಗ್ ಸದನದಲ್ಲಿ ಅತ್ಯಂತ ಹಿರಿಯ ಶಾಸಕರಾಗಿದ್ದಾರೆ. ಈಗ ಸ್ಪೀಕರ್ ಹುದ್ದೆಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಉಪ ಮುಖ್ಯಮಂತ್ರಿಗಳಾದ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ, ನಿರ್ಗಮಿತ ಛತ್ತೀಸ್ಗಢ ವಿಧಾನಸಭೆಯಲ್ಲಿ ಸ್ಪೀಕರ್ ಆಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಮತ್ತು ಮಾಜಿ ಸಿಎಂ ಭೂಪೇಶ್ ಬಘೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ಛತ್ತೀಸ್ಗಢದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡುವುದು ತಮ್ಮ ಹೊಸ ಜವಾಬ್ದಾರಿಯಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!