ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಶಿವಮೊಗ್ಗ:
ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಸಿರುವ ಜಾತಿ ಗಣತಿಯನ್ನು ಸಮ್ಮಿಶ್ರ ಸರ್ಕಾರದ ಮಖ್ಯಮಂತ್ರಿ ಎಚ್.ಡಿ.
ಕುಮಾರಸ್ವಾಮಿ ಬಿಡುಗಡೆ ಮಾಡಲಿಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಟೀಕಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಪಡೆದಿದ್ದ ಸಿದ್ದರಾಮಯ್ಯನವರೇ ಬಿಡುಗಡೆ ಮಾಡಬಹುದಿತ್ತು. ಆ ಕೆಲಸ ಮಾಡದೆ ಈಗ ಕುಮಾರಸ್ವಾಮಿ ಮೇಲೆ ಹೊರಿಸುತ್ತಿದ್ದಾರೆ ಎಂದ ಅವರು, ಜಯಪ್ರಕಾಶ್ ಹೆಗಡೆ ವರದಿ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಹಿಂದುತ್ವದ ಆಧಾರದ ಮೇಲೆ. ಹೀಗಾಗಿ ಗಣಪತಿ ಉತ್ಸವ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಕೋವಿಡ್ ಮಾರ್ಗಸೂಚಿ ಪಾಲನೆಯಲ್ಲಿ ಹಬ್ಬ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ. ಅದರಂತೆ ಉತ್ಸವ ನಡೆಯಲಿದೆ. ಜನಾಶೀರ್ವಾದ ಯಾತ್ರೆಯಲ್ಲಿ ನಿಯಮ ಪಾಲನೆಯಾಗಿಲ್ಲ. ಹೀಗಾಗಿ ಗಣಪತಿ ಹಬ್ಬಕ್ಕೂ ಅನುಮತಿ ನೀಡಿ ಎನ್ನುವುದನ್ನು ಒಪ್ಪುವುದಿಲ್ಲ. ಹಬ್ಬವೂ ಮುಖ್ಯ, ಜನರ ಆರೋಗ್ಯವೂ ಕೂಡ ಅತೀ ಮುಖ್ಯ ಎಂದರು.
ಮುಂಬರುವ ಚುನಾವಣೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುತ್ತದೆ ಎಂದು ಅಮಿತ್ಶಾ ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ಎಲ್ಲರ ಒಲವಿದೆ. ಈ ಬಗ್ಗೆ ಪಕ್ಷದಲ್ಲಿ ಚರ್ಚಿಸಲಾಗುತ್ತದೆ. ಚುನಾವಣೆಯಲ್ಲಿ ಸಿಎಂ ಬೊಮ್ಮಾಯಿ ಅವರ ಪಾತ್ರವೂ ಮುಖ್ಯವಾಗಿರುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.