ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ದಿಗಂತ ವರದಿ ವಿಜಯಪುರ:

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಸೋಮವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ, ಶಾಸಕರಾದ ಶಿವಾನಂದ ಪಾಟೀಲ, ಯಶವಂತ ರಾಯಗೌಡ ಪಾಟೀಲ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರು ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಜೊತೆ ಮಾತನಾಡಿರುವೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಶ್ರೀಗಳು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆನೆ ಎಂದರು. ಸಿದ್ದೇಶ್ವರ ಶ್ರೀಗಳು ದೊಡ್ಡ ಧಾರ್ಮಿಕ ಸಂತ, ಅವರು ಪ್ರವಚನದ ಮೂಲಕ ಜನರಲ್ಲಿ ಧರ್ಮದ ಬಗ್ಗೆ ಜಾಗೃತಿ ಮೂಡಿಸಿದವರು ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!