ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಹಿಂ ಅವರು ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜಕೀಯ ಮಾತುಕತೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವ ಕುರಿತು ದೆಹಲಿಯಲ್ಲಿ ತೀರ್ಮಾನ ಮಾಡಲಾಗುತ್ತದೆ. ಸಮಯವಾದಾಗ ದೆಹಲಿಗೆ ಹೋಗಿ ಚರ್ಚೆ ನಡೆಸುತ್ತೇನೆ ಎಂದರು.
ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ನನ್ನ ನಿವಾಸಕ್ಕೆ ಆಗಮಿಸಿ, ಮಾತುಕತೆ ನಡೆಸಿದರು ಎಂದು ಬರೆದುಕೊಂಡಿದ್ದಾರೆ.