ಮಾಜಿ ಸಿಎಂ ಸಿದ್ದು ಪರ ಪ್ರಚಾರಕ್ಕಿಳಿದ ಸೊಸೆ ಸ್ಮಿತಾ ರಾಕೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದೆಲ್ಲೆಡೆ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿಯೇ ಸಾಗುತ್ತಿದೆ. ಈ ನಡುವೆ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಅವರ ಸೊಸೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್‌ ಸಿದ್ದರಾಮಯ್ಯ, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ ಹಾಗೂ ನಟ ದುನಿಯಾ ವಿಜಯ್‌ ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಾರೆಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು. ಈ ನಡುವೆ ತಾವೂ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅತ್ಯಧಿಕ ಮತಗಳಿಂದ ಸಿದ್ದರಾಮಯ್ಯನವರು ಗೆಲ್ಲುವ ವಿಶ್ವಾಸ ಇದೆ ಎಂದು ವ್ಯಕ್ತಪಡಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!