ಮಾಜಿ ಸಿಎಂ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ‌ ಬಳಲುತ್ತಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದೆರಡು ದಿನಗಳಿಂದ ಅನಾರೋಗ್ಯಕ್ಕೊಳಗಾದ ಎಸ್. ಎಂ. ಕೃಷ್ಣ ಅವರನ್ನು ಮೊದಲು ವಿಠ್ಠಲ್ ಮಲ್ಯ‌ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!