Wednesday, February 8, 2023

Latest Posts

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದರು. ಈ ವಿಚಾರವನ್ನು ಹೈಕಮಾಂಡ್​ ಗಮನಕ್ಕೆ ಎಂದು ಹೇಳಿದ್ದಾರೆ.

ಈಗಾಲೇ ನನಗೆ 90 ವರ್ಷ. ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವು ಇರಬೇಕು. 90ರಲ್ಲಿ ನಾವು 50 ವರ್ಷದ ರೀತಿ ನಟನೆ ಮಾಡಲು ಸಾಧ್ಯವಿಲ್ಲ. ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಸ್.ಎಂ ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯು ಸಹ ಕಾರ್ಯ ನಿರ್ವಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!