ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಅಧಿಕಾರಿಗಳ ಪ್ರಕಾರ, ಎಸ್.ಎಂ.ಕೃಷ್ಣ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಅನಾರೋಗ್ಯದ ಕಾರಣ ಎಸ್.ಎಂ.ಕೃಷ್ಣ ಅವರು ಏಪ್ರಿಲ್ 22 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ನಂತರ ಅವರನ್ನು ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ.
ಆ ನಂತರ ಎಸ್.ಎಂ.ಕೃಷ್ಣ ಅವರ ಆರೋಗ್ಯ ಏ.29ರಂದು ಹದಗೆಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.