ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲರಾದ ಎಸ್ ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಇಂದು ಹುಟ್ಟೂರಿನಲ್ಲಿ ಸಾಕಾರ ಸರಕಾರಿ ಗೌರವದೊಂದಿಗೆ ನಡೆಯಿತು.
ಮಂಡ್ಯದ ಸೋಮನಹಳ್ಳಿ ಬಳಿ ಪಾರ್ಥಿವ ಶರೀರಕ್ಕೆ ಗಣ್ಯರಿಂದ ಪುಷ್ಪನಮನ ಸಲ್ಲಿಸಿದರು. ಬಳಿಕ ಪೊಲೀಸರಿಂದ ಕುಶಾಲತೋಪು ಸಿಡಿಸಿ ಸರಕಾರಿ ಗೌರವ ಸಲ್ಲಿಸಲಾಯಿತು.
ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯದ ಬಳಿಕ ಹಿಂದು ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.
ರಾಷ್ಟ್ರಗೀತೆ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಗಿದೆ. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರುಶನ ಪಡೆದಿದ್ದು, ಅಂತ್ಯಕ್ರಿಯೆ 15 ಜನ ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದ್ದಾರೆ. ಒಕ್ಕಲಿಗ ಸಂಪ್ರದಾಯದಂತೆ ತಾತನ ಚಿತೆಗೆ ಮೊಮ್ಮಗ ಅಮರ್ತ್ಯ ಅಗ್ನಿಸ್ಪರ್ಶಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ. ಕುಮಾರಸ್ವಾಮಿ, ಸುಮಲತಾ ಅಂಬರೀಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಭಾಗಿಯಾಗಿದ್ದಾರೆ.