ಮಾಜಿ ಸಿಎಂ ಎಸ್​ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದಷ್ಟೇ ​ಎಸ್ಎಂ‌ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು.

ಇಂದು ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!