ಹೊಸದಿಗಂತ ಡಿಜಿಟಲ್ ಡೆಸ್ಕ್;
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಇಂದು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಶ್ವಾಸಕೋಶದ ಸೋಂಕು ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಚಿಕಿತ್ಸೆ ನೀಡಿದ ಮಣಿಪಾಲ ವೈದ್ಯರ ತಂಡ ಹಾಗೂ ಸಿಬ್ಬಂದಿಗೆ ಎಸ್.ಎಂ.ಕೃಷ್ಣ ಅವರು ಧನ್ಯವಾದ ತಿಳಿಸುವಂತೆ ಹೇಳಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಏ.29 ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.