ಬಿಜೆಪಿಗೆ ಕಾಂಗ್ರೆಸ್ ಮಾಜಿ ಸಿಎಂ ಅಶೋಕ್ ಚವಾಣ್ ಸೇರ್ಪಡೆ: ನಾಳೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ನಾಯಕ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಶೋಕ್ ಚವಾಣ್ ಬಿಜೆಪಿ ಸೇರಿದ್ದಾರೆ. ಫೆಬ್ರವರಿ 14 ರಂದು ಅಶೋಕ್ ಚವಾಣ್ ಬಿಜೆಪಿಯಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಹೊಸ ರಾಜಕೀಯ ಜೀವನ ಆರಂಭಿಸುತ್ತಿದ್ದೇನೆ ಎಂದು ಅಶೋಕ್ ಚವಾಣ್ ಹೇಳಿದ್ದಾರೆ. ಬಿಜೆಪಿ ಸೇರಿಕೊಂಡಿರುವ ಅಶೋಕ್ ಚವಾಣ್ ನಾಳೆ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. ಫೆಬ್ರವರಿ 15 ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಅಶೋಕ್ ಚವಾಣ್ ಪಕ್ಷ ತೊರೆದಿರುವ ಕಾರಣ ಮಹಾರಾಷ್ಟ್ರ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ. ಒಂದೆಡೆ ರಾಜ್ಯಸಭಾ ಚುನಾವಣೆ ಸಂಕಷ್ಟವಾಗಿದ್ದರೆ, ಮತ್ತೊಂದೆಡೆ ಅಶೋಕ್ ಚವಾಣ್ ಬೆಂಬಲಿಗರು ಇದೀಗ ಬಿಜೆಪಿಯತ್ತ ವಾಲುತ್ತಿದ್ದಾರೆ. ಅಶೋಕ್ ಚವಾಣ್ ಬೆನ್ನಲ್ಲೇ ಕೆಲ ಕಾಂಗ್ರೆಸ್ ನಾಯಕರು ಬಿಜೆಪಿ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!