ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಡಿ.ಬಿ. ಇನಾಮ್ದಾರ್‌ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ.

ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.

ಇನಾಮ್ದಾರ್‌ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್‌ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಶಾಲಿಯಾಗಿದ್ದರು.

1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!