ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು !

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

76 ವರ್ಷದ ನಾಯಕಿ ಸೋನಿಯಾ ಗಾಂಧಿ, ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.

“ಯುಪಿಎ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಮಾರ್ಚ್ 2, 2023 ರಂದು ಜ್ವರದ ಕಾರಣದಿಂದ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೀಕ್ಷಣೆ ಮತ್ತು ತನಿಖೆಗೆ ಒಳಪಡಿಸಲಾಗಿದೆ, ಅವರ ಸ್ಥಿತಿ ಸ್ಥಿರವಾಗಿದೆ” ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ ಡಿಎಸ್ ರಾಣಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!