ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಚೇತರಿಸಿಕೊಂಡಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಸುಮಾರು ಒಂದು ವಾರದ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ.
ಎದೆಯ ಸೋಂಕು ಮತ್ತು ಹದಗೆಡುತ್ತಿರುವ ಆಸ್ತಮಾದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 5ರ ಸಂಜೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹಿರಿಯ ತಜ್ಞ ಡಾ. ಅರುಪ್ ಬಸು ಅವರ ಮೇಲ್ವಿಚಾರಣೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು.
ಆಸ್ಪತ್ರೆಯ ಅಧ್ಯಕ್ಷ ಡಾ. ಅಜಯ್ ಸ್ವರೂಪ್ ಅವರ ಪ್ರಕಾರ, ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ ಮತ್ತು ಅವರ ಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರನ್ನು ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಮನೆಯಲ್ಲಿಯೇ ಚಿಕಿತ್ಸೆಯನ್ನು ಮುಂದುವರಿಸಲು ವೈದ್ಯರು ಸೂಚಿಸಿದ್ದಾರೆ.

