Saturday, December 9, 2023

Latest Posts

ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಕಿಡ್ನಾಪ್?: ವೈರಲ್ ಆದ ವಿಡಿಯೋ ಅಸಲಿಯತ್ತೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟೀಂ ಇಂಡಿಯಾ ಮಾಜಿ ನಾಯಕ, ಭಾರತಕ್ಕೆ ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಕಪಿಲ್ ದೇವ್ ಅವರ ಅಪಹರಣವಾಗಿದೆಯಾ? ಅನ್ನೋ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹೌದು, ಕಪಿಲ್ ದೇವ್ ಕೈಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಕೂಡ ಆತಂಕ ಹೊರಹಾಕಿದ್ದಾರೆ. ಇದು ಕಪಿಲ್ ಪಾಜಿ ಅಲ್ಲಾ ಎಂದು ಭಾವಿಸುವೆ, ಇಷ್ಟೇ ಅಲ್ಲ ಕಪಿಲ್ ಚೆನ್ನಾಗಿದ್ದಾರೆ ಎಂದುಕೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಕಿಡ್ನಾಪ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ವಿಡಿಯೋದಲ್ಲಿರುವುದು ಕಪಿಲ್ ದೇವ್ ಅನ್ನೋದರಲ್ಲಿ ಎರಡು ಮಾತಿಲ್ಲ. ಆದರೆ ಇದು ಚಿತ್ರೀಕರಣ ಒಂದು ತುಣುಕು. ಕಪಿಲ್ ದೇವ್ ಅವರನ್ನು ಅಪಹರಣ ಮಾಡುತ್ತಿರುವ ದೃಶ್ಯ ಇದಾಗಿದೆ. ಚಿತ್ರ ಅಥವಾ ಜಾಹೀರಾತಿಗಾಗಿ ಈ ವಿಡಿಯೋ ಶೂಟ್ ಮಾಡಲಾಗಿದೆ. ಆದರೆ ಈ ಸಣ್ಣ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಇಬ್ಬರು ಕಪಿಲ್ ದೇವ್ ಅವರ ಕೈಗಳನ್ನು ಹಿಂಭಾಗಕ್ಕೆ ಕಟ್ಟಿದ್ದಾರೆ. ದಾರದಿಂದ ಕೈಗಳನ್ನು ಬಿಗಿಯಾಗಿ ಕಟ್ಟಲಾಗಿದೆ. ಇನ್ನು ಕಪಿಲ್ ದೇವ್ ಕಿರುಚಾಡದಂತೆ ಬಾಯಿಗೆ ಬಟ್ಟೆ ತುರುಕಲಾಗಿದೆ. ಬಳಿಕ ಇಬ್ಬರು ಕಪಿಲ್ ದೇವ್ ಅವರನ್ನು ಎಳೆದುಕೊಂಡು ಸಾಗುತ್ತಿರುವ ದೃಶ್ಯವಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!