ಹೊಸದಿಗಂತ ವರದಿ ಮಡಿಕೇರಿ:
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರು ಗುರುವಾರ ಮಡಿಕೇರಿಯ ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ:
ತಮ್ಮ ಪತ್ನಿ ಪ್ರಿಯಾಂಕ ಚೌಧರಿ, ಮಕ್ಕಳಾದ ಗ್ರೇಸಿಯಾ ರೈನಾ ಹಾಗೂ ರಿಯೋ ರೈನಾ ಅವರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ನಗರಸಭೆ ಸದಸ್ಯ ಪ್ರಕಾಶ್ ಆಚಾರ್ಯ ಜೊತೆಗಿದ್ದರು.



