ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ(66) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯಶ್ಪಾಲ್ ಶರ್ಮಾ ಅವರು ಪತ್ನಿ ರೇಣು ಶರ್ಮಾ, ಮಕ್ಕಳಾದ ಪೂಜಾ, ಪ್ರೀತಿ ಹಾಗೂ ಚಿರಾಗ್ರನ್ನು ಅಗಲಿದ್ದಾರೆ. ಇಂದು ಬೆಳಗ್ಗೆ 7:30 ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
1983ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡದೊಂದಿಗೆ ಯಶ್ ಪಾಲ್ ಶರ್ಮಾ ಆಡಿದ್ದರು. ಈ ಸಂದರ್ಭದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಿತ್ತು.
ಅಪಾರ ಅಭಿಮಾನಿಗಳು ಯಶ್ ಪಾಲ್ ಶರ್ಮಾ ಅವರ ಆತ್ಮಕ್ಕೆ ಶಾಂತಿ ಕೋರಿದ್ದು, ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.